ಶಿವಮೊಗ್ಗ; ಮೇ 03; : ಮೈಸೂರು ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ

ಸಂಸ್ಥೆಯಾಗಿದ್ದು, ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕೆಗಳ ಕೌಶಲ ಬೇಡಿಕೆಗೆ ಅನುಗುಣವಾಗಿ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.

ಪಿಯುಸಿ ಉತ್ತೀರ್ಣ/ಅನುತೀರ್ಣರಾದವರಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ದಿನಾಂಕ 26.04.2025 ರಿಂದ ಸಿಪೆಟ್ ಮೈಸೂರು ಕಾಲೇಜ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದ ವಿದ್ಯಾರ್ಥಿಗಳು ಈ ವೃತ್ತಿ ಮಾರ್ಗದರ್ಶನ

ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಶ್ರೀಕಾಂತ್ ಶಿರಾಲಿ ಯವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ: 0821-2510618/ 9480253024/ 9791431827 ಗಳನ್ನು ಸಂಪರ್ಕಿಸುವುದು.