ಶಿವಮೊಗ್ಗ, ಮೇ 09: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ-2025ರ ಮಾಹೆಯ. ವಿವಿಧ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಮೇ 13 ರಂದು ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮೇ 20 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಹಾಗೂ ಮೇ 27 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣಗಳಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಲಿದೆ.

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ

ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.