ಶಿವಮೊಗ್ಗ,ಮೇ, 12: ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ
ಹೊರವಲಯದ ಗುರುಪುರದ ಪುರಾತನ ಕಾಲದ”ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಹುಣ್ಣಿಮೆಯ ಪ್ರಯುಕ್ತ

ಆಯೋಜಿಸಲಾಗಿದ್ದ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ

ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿಯವರು ಗಣ್ಯರು, ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.