ಹೊಸನಗರ: ನಗರದಿಂದ ಹೊಸನಗರ ಮಾರ್ಗದ ದರ್ಗಾ ಸಮೀಪದ ದಿಣ್ಣೆ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಬೈಕ್ ಸವಾರ ಸಾಗರ ತಾಲೂಕಿನ ಹೊನ್ನೆಸರ ಗ್ರಾಮದ ಮೃತ ಅಶೋಕ (24) ಎಂದು ತಿಳಿದು ಬಂದಿದೆ. ಅಡಗೋಡಿಯಲ್ಲಿ ತೋಟದ ಕೆಲಸ ಮುಗಿಸಿಕೊಂಡು ಹೊನ್ನೆಸರದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕೂಡಲೇ ಮೃತ ದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಎಸ್ಐ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ,. ಅಪಘಾತ ನಡೆದ ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಮುಕ್ತಗೊಳಿಸಿದ್ದಾರೆ.
