ಶಿವಮೊಗ್ಗ, ಮೇ.24 : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಜೂನ್ 10 ಮತ್ತು 11 ಜೂನ್ 2025 ರಂದು ವಿವಿದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ರಾಷ್ಟ್ರ ಭಕ್ತ ಬಳಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ

ಪಿ.ಯು.ಸಿ. ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಿಸಲು ರಾಷ್ಟ್ರ ಭಕ್ತ ಬಳಗ ನಿರ್ಧರಿಸಿದೆ ಎಂದು ರಾಷ್ಟ್ರ ಭಕ್ತ ಬಳಗ ಸಂಚಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಶಿವಮೊಗ್ಗ ನಗರ ವಿಧಾನಸಭಾ

ಕ್ಷೇತ್ರ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಯ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ನಕಲು ಪ್ರತಿ ಹಾಗೂ ಮೊಬೈಲ್ ಸಂಖ್ಯೆಯನ್ನು

ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಕೆ.ಎಸ್.ಈಶ್ವರಪ್ಪನವರ ಕಚೇರಿಗೆ 01-06-2025 ರ ಒಳಗಾಗಿ ತಲುಪಿಸಲು ರಾಷ್ಟ್ರ ಭಕ್ತ ಬಳಗ ಸಂಚಾಲಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವ್ಯಕ್ತಿಗಳನ್ನು ಸಂಪರ್ಕಿಸಬಹುದು
ರಾಜು : 9448438196
ಶ್ರೀಕಾಂತ್ : 9900855404
ಸಂತೋಷ್ : 9482474343