ರಿಪ್ಪನ್ಪೇಟೆ: ಬಾಲಕಿಗೆ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೊಲೀಸ್ ಠಾಣೆ ವ್ಯಾಪ್ತಿಯ ಯುವಕ, ಖೋಖೋ ತರಬೇತಿ ನೀಡುವ ನೆಪದಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯ ಮಾಡುತ್ತಿದ್ದ ಎನ್ನಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.