ಶಿವಮೊಗ್ಗ, ಮೇ -28 : : ರೈಲ್ವೇ ಇಲಾಖೆಯು ಸೆಕ್ಯೂರಿಟಿ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರುಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಆಸಕ್ತ

ಮಾಜಿ ಸೈನಿಕರುಗಳಿಂದ ಅರ್ಜಿ ಆಹ್ವಾನಿಸಿದ್ದು

, ಈವರೆಗೆ 48 ಮಾಜಿ ಸೈನಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊAಡಿದ್ದು, ನೋಂದಾಯಿತರ ಪಟ್ಟಿಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದೆ.

ಈ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದರೆ ಮೇ 30 ಒಳಗೆ ಈ ಕಛೇರಿಯಲ್ಲಿ ಸಲ್ಲಿಸಬಹುದಾಗಿದೆಯೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.