ಶಿವಮೊಗ್ಗ : ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜಿನಲ್ಲಿ ಇಂದು ಎಂಕಾಂ ಮತ್ತು ಎಂಬಿಎ ವಿದ್ಯಾರ್ಥಿಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾಲೇಜಿನ ಸುತ್ತಮುತ್ತ ಇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಆರಿಸಿ, ಸ್ವಚ್ಛಗೊಳಿಸಿದರು. ಕಾಲೇಜನ್ನು ಕಸಮುಕ್ತವಾಗಿ ಇಟ್ಟುಕೊಳ್ಳುವ ಬಗ್ಗೆ ವಿದ್ಯಾರ್ಥಿಗಳು ಕಳೆದ ೨ ದಿನಗಳಿಂದ ಈ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಹ್ಯಾದ್ರಿಯ ಮೂರೂ ಕಾಲೇಜಿನ ಎಸ್ಟೇಟ್ ವಿಭಾಗದ ನಿರ್ದೇಶಕ ಕೆ.ಎನ್. ಮಂಜುನಾಥ್ ಮಾತನಾಡಿ, ಸಹ್ಯಾದ್ರಿಯ ಮೂರು ಕಾಲೇಜುಗಳ ಪರಿಸರ ಉಳುವಿಗೆ ತಮ್ಮದೇ ಆದ ಕೊಡುಗೆ ನೀಡಿವೆ. ಚಂದದ ಉದ್ಯಾನವನಗಳನ್ನು ನಿರ್ಮಿಸಿದೆ.

ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದೇವೆ. ಪ್ಲಾಸ್ಟಿಕ್ಮುಕ್ತ ಕಾಲೇಜನ್ನಾಗಿ ಮಾಡುವ ಉದ್ದೇಶದಿಂದ ಎರಡು ದಿನಗಳಿಂದ ಪ್ಲಾಸ್ಟಿಕ್ ಆಯುವ ಕಾರ್ಯಕ್ರಮಗಳನ್ನು ನಮ್ಮ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಇದು ಅತ್ಯಂತ ಸಂಭ್ರಮದ ವಿಷಯವಾಗಿದೆ ಎಂದರು.

ಪ್ರಾಂಶುಪಾಲ ಡಾ. ಅವಿನಾಶ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ವಹಿಸುತ್ತಿರುವುದು ಅತ್ಯಂತ ಶ್ಲಾಘನೀಯ. ಪ್ಲಾಸ್ಟಿಕ್ ಸ್ವಚ್ಛತಾ ಕಾರ್ಯಕ್ರಮಗಳು ನಮ್ಮ ಕಾಲೇಜಿನಲ್ಲಿ ಆಗಾಗ ನಡೆಯುತ್ತಿವೆ. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಈಗ ಇಡೀ ಕಾಲೇಜು ಆವರಣ ಪ್ಲಾಸ್ಟಿಕ್ ಮುಕ್ತವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಾಧ್ಯಾಪಕ ಪ್ರಕಾಶ್ ಮರಗನಳ್ಳಿ, ರಾಥೋಡ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು.