ಶಿವಮೊಗ್ಗ: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತದಲ್ಲಿ ಯುವಕನೊಬ್ಬ ಸಾವು ಕಂಡಿರುವ ಘಟನೆ ವರದಿಯಾಗಿದೆ.

ಮೃತ ಯುವಕ ವೆಂಕಟೇಶ ನಗರದ ನಿವಾಸಿ ಅಭಿ (21). ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ತೀವ್ರ ಗಾಯಗೊಂಡಿದ್ದ ಅಭಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.