ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಇಂದು ಸ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು . ಒಂದು ವರ್ಷದ ಬಳಿಕ ಪುನಃ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

ಆಯುಕ್ತರಾಗಿದ್ದ ಡಾ. ಕವಿತಾ ಯೋಗಪ್ಪನವರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಡಾ. ಕವಿತಾ ಯೋಗಪ್ಪನವರ್ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.