ಶಿವಮೊಗ್ಗ, ಜೂ.16:
ಶಿವಮೊಗ್ಗ ಶರಾವತಿ ನಗರದ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿಗಳು 625 ಅಂಕಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಈ ಮೊದಲು ಪ್ರಥಮ ಫಲಿತಾಂಶದಲ್ಲೇ ಸಹಿಷ್ಣು ಎನ್. ಅವರು 625 ಅಂಕ ಪಡೆದಿದ್ದು ಟಾಪರ್ ಆಗಿದ್ದರು.

ಆಗ 624 ಅಂಕ ಪಡೆದಿದ್ದ ಸಂಜನಾ ಎಸ್ ಎಂಬ ವಿದ್ಯಾರ್ಥಿನಿ 625 ಅಂಕ ಗಳಿಸುವ ಮೂಲಕ ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದು,

ಆದಿಚುಂಚನಗಿರಿ ಮಹಾಸಂಸ್ಥಾನದ ಪೂಜ್ಯರು ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಶುಭ ಹಾರೈಸಿದ್ದಾರೆ.
ಈ ಪ್ರೌಢಶಾಲೆಯಲ್ಲಿ 81 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 85 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ

ಉತ್ತೀರ್ಣರಾಗಿದ್ದಾರೆ. 16 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕವೃಂದ ಅಭಿನಂದಿಸಿದೆ.