ಶಿವಮೊಗ್ಗ, ಜೂನ್.17; :ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ (ಡಿಎನ್ಬಿ) ತರಬೇತಿಯ ವೈದ್ಯ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಹೆಚ್ಚುವರಿ ಅಧ್ಯಾಪಕರ ಹುದ್ದೆಗೆ ನೇಮಕ ಮಾಡಿಕೊಳ್ಳುವ ಸಲುವಾಗಿ ಜೂ. 20 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ

1.00ರವರೆಗೆ ಸಾಗರ ಆಡಳಿತ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು,

ಆಸಕ್ತಿಯುಳ್ಳ ಎಂಬಿಬಿಎಸ್/ ಎಂಡಿ/ಎಂಎಸ್ ಇನ್ ಪೀಡಿಯಾಟ್ರಿಕ್ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳು, ಇತರೇ

ದಾಖಲಾತಿಗಳು ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವಂತೆ ಆಡಳಿತ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08183-226076 ನ್ನು ಸಂಪರ್ಕಿಸುವುದು.