ಶಿವಮೊಗ್ಗ : ಆದಿಚುಂಚನಗಿರಿ ಮಠ ಹಾಗೂ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜೂ.27 ರಂದು ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಏರ್ಪಡಿಸಲಾಗುತ್ತಿದ್ದು, ಒಕ್ಕಲಿಗ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಒಕ್ಕಲಿಗರ ಸಂಘಟನೆಗಳ ಒಕ್ಕೂಟ ನಡೆಸಿದ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪಿಯು ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಕುರಿತು ಪ್ರಬಂಧ ರಚನಾ ಸ್ಪರ್ಧೆ ನಡೆಸಲು ತೀರ್ಮಾನಿಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 610 ಕ್ಕೂ ಹೆಚ್ಚು ಅಂಕ, ಪಿಯುಸಿ ಪರೀಕ್ಷೆಯಲ್ಲಿ 580 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಜೊತೆಯಲ್ಲಿ ಕುವೆಂಪು ವಿವಿ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಗುತ್ತಿದೆ. ಇದರೊಂದಿಗೆ ಕೃಷಿ, ಗೃಹ, ಕೈಗಾರಿಕಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧಕರಿಗೆ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಸಾಧಕರು, ರಂಗನಟರು, ಸಾಹಿತ್ಯ ಸಾಂಸ್ಕೃತಿಕ ಸಾಧಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಅಭಿನಂದಿಸಲಾಗುತ್ತಿದೆ.

ಸಾಧಕರು ತಮ್ಮ ಸ್ವವಿವರದೊಂದಿಗೆ ಡಿ.ಮಂಜುನಾಥ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶರಾವತಿ ನಗರ, ಶಿವಮೊಗ್ಗ ಮೊ.ಸಂಖ್ಯೆ : 9449552795 ಸಂಪರ್ಕಿಸಲು ಕೋರಿದೆ.
ಸಭೆಯಲ್ಲಿ ಒಕ್ಕಲಿಗರ ಸಂಘಟನೆಗಳ ಮುಖ್ಯಸ್ಥ ಬಿ.ಎ.ರಮೇಶ್ ಹೆಗಡೆ, ಕಸಾಪ ಅಧ್ಯಕ್ಷ ಡಿ.ಮಂಜುನಾಥ, ಗೋ.ರಮೇಶ್ ಗೌಡ, ಕೆ.ಚೇತನ್, ರಾಮಕೃಷ್ಣ, ಉದ್ಯಮಿ ರಮೇಶ್ ಹೆಗಡೆ, ಎಚ್.ಕೆ.ರಘುರಾಜ್, ಭಾರತಿ ರಾಮಕೃಷ್ಣ, ಶಾಂತಾ ಸುರೇಂದ್ರ, ನಿಂಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.