ಶಿವಮೊಗ್ಗ : ವಸತಿ ಯೋಜನೆಯಡಿಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲಿಂರಿಗೆ ಶೇ.೧೫ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ತೀರ್ಮಾನಿಸಿರುವುದನ್ನು ವಿರೋಧಿಸಿ, ರಾಷ್ಟ್ರಭಕ್ತ ಬಳಗ ಜೂನ್೨೫ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ದೇಶದಲ್ಲಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಮತಾಂಧ ಮುಸ್ಲಿಂ ಯುವಕರು ಲೌಜಿಹಾದ್ ಮೂಲಕ ಹಿಂದೂಗಳನ್ನು ನಾಶಮಾಡಿ ಇಸ್ಲಾಮಿಕರಣ ಮಾಡಲು ಹೊರಟಿರುವಾಗ ರಾಜ್ಯ ಸರ್ಕಾರ ಮುಸ್ಲಿಂರನ್ನು ಓಲೈಸಿಕೊಂಡು ತುಷ್ಟೀಕರಣದ ರಾಜಕೀಯ ಮಾಡಿ, ಮತಬ್ಯಾಂಕ್ ಗಟ್ಟಿಗೊಳಿಸಲು ಈಗ ವಸತಿ ಜಿಹಾದ್ ಮಾಡಲು ಹೊರಟಿದೆ ಎಂದು ರಾಷ್ಟ್ರಭಕ್ತ ಬಳಗದ ಮುಖಂಡ ಕೆ.ಈ. ಕಾಂತೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.’

ಈ ಹಿಂದೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿ, ಇನ್ನುಳಿದ ಧರ್ಮೀಯರಿಗೆ ಅನ್ಯಾಯಮಾಡಿದ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವಸತಿ ಯೋಜನೆಯಡಿ ಮುಸ್ಲಿಂರಿಗೆ ಶೇ.೧೫ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದೆ. ಬುದ್ಧ, ಬಸವ, ಅಂಬೇಡ್ಕರ್ ಎಂದು ಬೊಗಳೆಬಿಡುವ ಸಿದ್ದರಾಮಯ್ಯ ಅಂಬೇಡ್ಕರ್ರವರು ವಿರೋಧಿಸಿದ್ದ ಧರ್ಮಾಧಾರಿತ ಮೀಸಲಾತಿಯನ್ನು ಅವರ ತತ್ವಕ್ಕೆ ತಿಲಾಂಜಲಿ ಇಟ್ಟು ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೆ ತರುವ ಮೂಲಕ ಅಂಬೇಡ್ಕರ್ರವರಿಗೆ ಅವಮಾನಿಸಿದ್ದಾರೆ ಎಂದು ದೂರಿದರು.

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ರಾಯಭಾರಿಯನ್ನಾಗಿಸಿದ ಸರ್ಕಾರ ಈಗ ಅಣ್ಣನ ಆಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಮಾತನ್ನು ಈಗ ಸರ್ವರೂ ಸಾಬರಪಾಲು ಎಂದು ನಿರೂಪಿಸಲು ಹೊರಟಿದೆ ಎಂದು ಆರೋಪಿಸಿದರು.

ರಾಜ್ಯದ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಆದರೂ ಈಗ ಬಡವರಿಗಾಗಿ ಮೀಸಲಿರುವ ಮನೆಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡಲು ಹೊರಟಿರುವುದು ಖಂಡನೀಯ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ರಾಷ್ಟ್ರಭಕ್ತ ಬಳಗದ ಕೆ.ಎಸ್. ಈಶ್ವರಪ್ಪರ ನೇತೃತ್ವದಲ್ಲಿ ಜೂನ್ ೨೫ರ ಬೆಳಿಗ್ಗೆ ೧೦ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಶಿವಪ್ಪನಾಯಕ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ. ಶಂಕರ್, ಇ. ವಿಶ್ವಾಸ್, ಶಿವಾಜಿ, ಜಾದವ್, ಚನ್ನಬಸಪ್ಪ, ಕುಬೇರಪ್ಪ, ಗೋವಿಂದಪ್ಪ ಇನ್ನಿತರರು ಉಪಸ್ಥಿತರಿದ್ದರು.