ಶಿವಮೊಗ್ಗ : ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-೨೦೨೫ರ ನೊಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಕಳೆದ ೨೫ ವರ್ಷಗಳಿಂದ ಮಣಿಪಾಲ್ ಆರೋಗ್ಯ ಕಾರ್ಡನ್ನು

ಪರಿಚಯಿಸಲಾಗುತ್ತಿದೆ. ಈ ಭಾರಿ ಸುಮಾರು ೬.೮೨ ಲಕ್ಷ ಸದಸ್ಯರು ಕಾರ್ಡನ್ನು ಹೊಂದಿದ್ದಾರೆ. ಸುಮಾರು ೭ವರೆ ಲಕ್ಷ ಗುರಿಮುಟ್ಟುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ ಕಳೆದ ಬಾರಿ ೨೨.೮ ಕೋಟಿ ಮೊತ್ತದಷ್ಟು ರಿಯಾಯಿತಿಯನ್ನು ಮಣಿಪಾಲ್ ಆಸ್ಪತ್ರೆ ನೀಡಿದೆ ಎಂದರು.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ

ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ ೨೦೨೫ ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದ ಅವರು, “ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ ಮಾರ್ಗದರ್ಶನದಲ್ಲಿ ೨೦೦೦ ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. ೨೫ ವರ್ಷಗಳಲ್ಲಿ, ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ ಎಂದರು.
ಕಾರ್ಡ್ ಸಣ್ಣದು-ಪ್ರಯೋಜನ ದೊಡ್ಡದು ಎಂಬ ನಿಟ್ಟಿನಲ್ಲಿ ಈ ಕಾರ್ಡನ್ನು ಪರಿಚಯಿಸಲಾಗುತ್ತಿದ್ದು, ಸಮಾಜದ ಎಲ್ಲಾ ವರ್ಗಗಳಿಗೂ ಇದು ಅನುಕೂಲವಾಗುತ್ತದೆ. ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಿ ಪ್ರಯೋಜನಗಳನ್ನು ಪಡೆಯಬಹುದು. ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯ ಕಾರ್ಡಿನ ಧ್ಯೇಯವಾಕ್ಯವಾಗಿದೆ ಎಂದರು.
ಸದಸ್ಯತ್ವ ವಿವರಗಳು : ಮಣಿಪಾಲ್ ಆರೋಗ್ಯ ಕಾರ್ಡ್ ೨೦೨೫ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. ೩೫೦, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳಿಗೆ ರೂ. ೭೦೦ ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. ೯೦೦. ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. ೬೦೦, ಕುಟುಂಬಕ್ಕೆ ರೂ. ೯೫೦ ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ.೧೧೦೦ ಆಗಿರುತ್ತದೆ ಎಂದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್ದಾರರಿಗೆ ರಿಯಾಯಿತಿ ಪ್ರಯೋಜನಗಳು
ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ ೫೦% ರಿಯಾಯಿತಿ (ಓಪಿಡಿ ದಿನಗಳು), ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ ೨೫% ರಿಯಾಯಿತಿ, ರೇಡಿಯಾಲಜಿ, ಓಪಿಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ ೨೦% ರಿಯಾಯಿತಿ, ಡಯಾಲಿಸಿಸ್ನಲ್ಲಿ ರೂ. ೧೦೦ ರಿಯಾಯಿತಿ, ಆಸ್ಪತ್ರೆ ಔಷಧಿಗಳ ಮೇಲೆ ೧೦% ವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್ಗಳಲ್ಲಿ ೨೫% ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್ಗಳನ್ನು ಹೊರತುಪಡಿಸಿ) ನೀಡಲಾಗುತ್ತದೆ ಎಂದರು.
ಕಾರ್ಡ್ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ, ತಿತಿತಿ.mಚಿಟಿiಠಿಚಿಟheಚಿಟಣhಛಿಚಿಡಿಜ.ಛಿomಗೆ ಭೇಟಿ ನೀಡಿ ಅಥವಾ ೯೯೮೦೮೫೪೭೦೦, ೦೮೨೦೨೯೨೩೭೪೮ ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಅನಿಲ್, ಸಂದೀಪ್, ಪ್ರತಿನಿದಿಗಳಾದ ನವೀನ್ ಮತ್ತು ವನಿತಾ, ಬಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು.
೨೦೨೫ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ
ಶಿವಮೊಗ್ಗ : ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ ಟೈಯರ್ಸ್, ವಿನೋಭನಗರದ ನವೀನ್ ಕೆ.ಆರ್. ೭೮೨೯೫೪೦೩೩೮, ಪ್ರತಿನಿಧಿಗಳಾದ ವಿಜಯ್ ಆನಂದ್, ೯೮೪೪೩೮೩೩೪೪, ಬಾಪೂಜಿ ಎಂ. ೯೯೧೬೧೩೧೮೮೦, ಬಾಲಕೃಷ್ಣ ಭಟ್-೮೭೯೨೧೨೮೮೭೮ ವಿಪ್ರ ಸೌಹಾರ್ದ, ೯೨೪೨೩೭೩೮೩೯, ಸೇಂಟ್ ಮಿಲಾಗ್ರೆಸ್ ಸೌಹಾರ್ದ ೯೫೩೮೪೦೦೬೦೪, ಕೃಷಿಕ್ ಸೌಹಾರ್ದ, ೯೬೮೬೨೬೪೯೬೬, ಶಾರದ ಸೌಹಾರ್ದ- ೯೮೮೦೮೩೮೪೩೦, ನಿತಿನ್ ಎಸ್.ಮೂರ್ತಿ: ೯೪೮೦೦೨೮೨೪೧, ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಗಾಂಧಿ ಬಜಾರ್, ಪ್ರವೀಣ್ ಎಸ್. ನವಲೆ-೯೯೮೦೭೩೧೦೫೧ ಮತ್ತು ಹತ್ತಿರದ ಅಧಿಕೃತ ಪ್ರತಿನಿಧಿಗಳಲ್ಲಿ ನೊಂದಾಯಿಸಿಕೊಳ್ಳಬಹುದು.