ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಎಂಸಿಎ ವಿಭಾಗದ ವತಿಯಿಂದ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ‘ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ’ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿನೋಬಾನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಜಗದೀಶ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಯುವ ಸಮೂಹದ ವಿನಾಶಕಾರಿಗೆ ದಾರಿಮಾಡಿಕೊಡುತ್ತದೆ. ಶಿಕ್ಷಣದ ಜೊತೆಗೆ ಸಮಾಜಿಕ ಜವಾಬ್ದಾರಿಯ ಸಹಾನುಭೂತಿಯಿಂದ ನಡೆದುಕೊಳ್ಳಿ. ಎಲ್ಲೆ ಕಾನೂನು ವಿರೋಧಿ ಚಟುವಟಿಕೆಗಳು ಕಂಡರು ನಿರ್ಭಯದ ಹೆಜ್ಜೆಗಳನ್ನು ತೆಗೆದುಕೊಳ್ಳಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಮಾತನಾಡಿ, ಮಾದಕ ವಸ್ತುಗಳ ಉಪಟಳ, ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿದೆ. ಯುವ ಸಮೂಹ ಇಂತಹ ಜಾಗತಿಕ ಪಿಡುಗನ್ನು ಹೋಗಲಾಡಿಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಂಬಿಎ ವಿಭಾಗದ ಪ್ರಾಧ್ಯಾಪಕ ಡಾ.ಸಂತೋಷ, ಎಂಸಿಎ ವಿಭಾಗದ ನಿರ್ದೇಶಕ ಡಾ.ಹೇಮಂತ ಕುಮಾರ್ ಉಪಸ್ಥಿತರಿದ್ದರು.