ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.8 ರಿಂದ ಶಿವಮೊಗ್ಗ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಮಹಾನಗರ ಪಾಲಿಕೆ ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಶಿವಮೊಗ್ಗ

ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ
ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏಳನೇ ವೇತನ ಆಯೋಗದ ಸೌಲಭ್ಯ, ನೇಮಕಾತಿ ನಿಯಮ ತಿದ್ದುಪಡಿ ಅಧಿಸೂಚನೆ, ಕೆಜಿಐಡಿ,ಜಿಪಿಎಫ್ ,

ಆರೋಗ್ಯ ಸಂಜೀವಿನಿ ಯೋಜನೆ ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿ ನಡೆಸಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.