ಶಿವಮೊಗ್ಗ: ಚಿತ್ರದುರ್ಗದಲ್ಲಿರುವ ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 16ನೇ ಪಟ್ಟಾಭಿμÉೀಕ , 27ನೇ ಲಾಂಛನ ದೀಕ್ಷಾ ಮಹೋತ್ಸವ ಹಾಗೂ ಶ್ರೀ ಗಳ 40ನೇ ಜನ್ಮ ವಧರ್ಂತ್ಯೋತ್ಸವ ಅಂಗವಾಗಿ ಜು. 18 ರಂದು ಚಿತ್ರದುರ್ಗದ ಭೋವಿ ಗುರುಪೀಠದ ಆವರಣದಲ್ಲಿ ʼಭೋವಿ ಜನೋತ್ಸವʼ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಜಿಲ್ಲೆಯಲ್ಲಿರುವ ಸಮಾಜದ ಬಾಂಧವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಮನವಿ ಮಾಡಿದ್ದಾರೆ.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಪಟ್ಟಾಭಿμÉೀಕ, ದೀಕ್ಷಾ ಮಹೋತ್ಸವಾ ಹಾಗೂ ಜನ್ಮ ವಧರ್ಂತ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಜುಲೈ 18 ರಂದು ಮಠದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತವೆ. ರಕ್ತದಾನ, ಪ್ರತಿಭಾ ಪುರಸ್ಕಾರ, ಸಮಾಜದ ಸಾಧಕರಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ನಡೆಯುವ ಹಿನ್ನೆಲೆಯಲ್ಲಿ ಅಂದಿನ ಸಮಾರಂಭವನ್ನು ಭೋವಿ ಜನೋತ್ಸವವಾಗಿ ಆಚಸಿರುತ್ತಾ ಬರಲಾಗಿದೆ. ಅಂತೆಯೇ ಈ ವರ್ಷವು ಕೂಡ ಭೋವಿ ಜನೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂದು ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಲ್ಲಿರುವ ಸಮಾಜದ ಪ್ರತಿಭಾವಂತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜು. 18 ರಂದು ಮಠದಲ್ಲಿ ನಡೆಯುವ ಭೋವಿ ಜನೋತ್ಸವದಲ್ಲಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಮಾಜದ ಗುರುಗಳಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯ ಮತ್ತು ರಾಜ್ಯದ ಅನೇಕ ವಿವಿಧ ಮಠಾಧೀಶರ ಸಮ್ಮುಖದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಮಾಜದ ಪ್ರಭಾವಿ ನಾಯಕರು,ಸಚಿವರು, ನಿಗಮ ಮಂಡಳಿ ಅಧ್ಯಕ್ಷರು, ಶಾಸಕರು, ಜನಪ್ರತಿನಿಧಿಗಳು ಸೇರಿದಂತೆ ಗಣ್ಯಾತೀಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಜಿಲ್ಲೆಯಲ್ಲಿರುವ ಸಮಾಜದ ಬಾಂಧವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.