ಶಿವಮೊಗ್ಗ : ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿಯ ಆವರಣದಲ್ಲಿ 15ನೇ ಆವರ್ತಿಯ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೇಳದಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಇಎಸ್, ಹೆಲ್ತ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಹಾಸ್ಪಿಟ್ಯಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಯಲಿದೆ ಎಂದರು.

ಆಳ್ವಾಸ್ ಶಿಕ್ಷಣ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜೆಂಟ್, ಬೇಸಿಕ್ ಸೈನ್ಸ್, ನಸಿರ್ಂಗ್, ಐಟಿಐ, ಡಿಪೆÇ್ಲಮಾ, ಪಿಯುಸಿ, ಎಸ್ಎಸ್ಎಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು.

ಯಾವುದೇ ಕೋರ್ಸ್ಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದರು.
ಮೇಳದಲ್ಲಿ 260ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 15,930 ಉದ್ಯೋಗ ಅವಕಾಶವಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ಸೈಟ್ ತಿತಿತಿ.ಚಿಟvಚಿsಠಿಡಿಚಿgಚಿಣi.ಛಿomನಲ್ಲಿ ಪ್ರಕಟಿಸಲಾಗಿದೆ. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ವೆಬ್ಸೈಟ್ನಲ್ಲೂ ನೊಂದಾವಣೆ ಮಾಡಿಕೊಳ್ಳಬೇಕು ಎಂದರು.
ಹೆಚ್ಚಿನ ಮಾಹಿತಿಗಾಗಿ 9611750531, 9741440490, ಹಾಗೂ ಕಂಪನಿಗಳ ನೋಂದಣಿಗೆ 9731953123ರಲ್ಲಿ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿತಿನ್ ಕೆ.ಆರ್. ಉಪಸ್ಥಿತರಿದ್ದರು.