ಶಿವಮೊಗ್ಗ : ಮೆಲ್ನಾಡ್ ಎಜುಕೇಶನ್ ಅಂಡ್ ಚಾರಿಟೆಬಲ್ ಟ್ರಸ್ಟ್ವತಿಯಿಂದ ಜು.31ರಂದು ಮಧ್ಯಾಹ್ನ 3 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೆಲ್ನಾಡ್ ಎಜುಕೇಶನ್ ಅಂಡ್ ಚಾರಿಟೆಬಲ್ ಟ್ರಸ್ಟ್, ಶಿವಮೊಗ್ಗ ಇದರ ವತಿಯಿಂದ ಕಳೆದ ಕೆಲವು ವರ್ಷಗಳಿಂದ SSಐಅ ಮತ್ತು PUಅ ಬೋರ್ಡ್ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪೆÇ್ರೀತ್ಸಾಹ ನೀಡುತ್ತಿದೆ.

ಪ್ರತಿ ವರ್ಷದಂತೆ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ SSಐಅ ಮತ್ತು PUಅಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ನಿರ್ಧರಿಸಲಾಗಿದೆ. ಪ್ರತಿವರ್ಷ ಜಿಲ್ಲಾ ಮಟ್ಟದ ಉತ್ತಮ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಗುತ್ತಿತ್ತು.

ಆದರೆ ಈ ಸಲ ನಮ್ಮ ಜಿಲ್ಲೆಯ ವಿದ್ಯಾರ್ಥಿನಿ ಯರು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು,ಜಿಲ್ಲೆಯು ಹೆಮ್ಮೆ ಪಡುವಂತಹ ವಿಷಯವಾಗಿದೆ. ಅವರಿಗೆ ವಿಶೇಷ ಬಹುಮಾನ ನೀಡಲಾಗುವುದು.

SSಐಅ ಪರೀಕ್ಷೆಯಲ್ಲಿ ಟಾಪ್ ಸ್ಥಾನ ಪಡೆದ 6 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ಹಾಗೂ 11 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ಅದೇ ರೀತಿ PUಅ ವಿಭಾಗದಲ್ಲಿ ಆಟ್ರ್ಸ್, ಕಾಮರ್ಸ್, ಸೈನ್ಸ್ ವಿಭಾಗಗಳ ಟಾಪ್ ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತದೆ. ಮತ್ತು ಕುವೆಂಪು ವಿಶ್ವವಿದ್ಯಾಲಯ ದಲ್ಲಿ ಅತಿ ಹೆಚ್ಚು ಸುವರ್ಣ ಪದಕಗಳನ್ನು ಪಡೆದಿರುವ ವಿದ್ಯಾರ್ಥಿನಿಗೆ ಸನ್ಮಾನಿಸಿ ಬಹುಮಾನ ನೀಡಲಾಗುವುದು.