ಶಿವಮೊಗ್ಗ : ನವುಲೆ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಎಸ್.ಎನ್. ಚನ್ನಬಸಪ್ಪ ಅವರು

ಪಾಲಿಕೆ ಆಯುಕ್ತ ಮಾಯಣ್ಣಗೌಡರೊಂದಿಗೆ ಸ್ಥಳಕ್ಕೆ ಇಂದು ಭೇಟಿ ನೀಡಿ

ಕಾರ್ಯವೈಖರಿಯನ್ನು ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಶೀಘ್ರದಲ್ಲೇ ಸೂರು ಕಲ್ಪಿಸುವಂತೆ ಸೂಕ್ತ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎನ್. ಗೋವಿಂದ್, ಕಾರ್ಯಪಾಲಕ ಅಭಿಯಂತರ ಭರತ್, ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.