ತೀರ್ಥಹಳ್ಳಿ : ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿಗಳು, ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿ ಕಿರಿಯಿಂದಾಗಿ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಾಳೂರು ವ್ಯಾಪ್ತಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಬಿಳುವೆ ಗ್ರಾಮದ ಕಣಬೂರು ಸಮೀಪದ ಹಲ್ಯಾಪುರ ಎಂಬಲ್ಲಿ ದಂಪತಿಗಳಿಬ್ಬರು ಮನೆಯಿಂದ 200 ಮೀ ದೂರದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ ನಾಯ್ಕ್ (72 ವರ್ಷ ) ಲಕ್ಷ್ಮಮ್ಮ (58 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು.

ಮನೆಗಾಗಿ ಸಾಲ ಮಾಡಿಕೊಂಡಿದ್ದರು. ಇದನ್ನು ಮನೆಯಲ್ಲಿ ಪ್ರೆಶ್ನೆ ಮಾಡಿದ್ದಾರೆ. ಇದರಿಂದ ಮನೆಯಲ್ಲಿ ಕಿರಿ ಕಿರಿ ಉಂಟಾಗಿದೆ. ಮನನೊಂದ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.