ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಭಾರಿ ಮಳೆಯಿಂದ ಮೂರು ಮನೆಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ.
ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಆನಂದಪುರ ಸಮೀಪದ ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣ್ಣೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಶೇಖರ ಎಂಬುವವರು ಮನೆಯ ಗೋಡೆ ಕುಸಿದು ಬಿದ್ದಿದ್ದು. ಉಳಿದ ಗೋಡೆಗಳು ಕುಸಿದು ಬೀಳುವ ಹಂತದಲ್ಲಿದ್ದು, ಈ ಮನೆಯಲ್ಲಿ ವಾಸವಾಗಿರುವ ಕುಟುಂಬವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
ಮಳೆಯಿಂದ ಪಟ್ಟಣದ ಭೋವಿ ಕಾಲೋನಿಯ ಗೋಪಿ ಎಂಬುವರ ಮನೆಯ ಗೋಡೆ ಸಂಪೂರ್ಣ ಕುಸಿದಿದೆ. ಹಾಗೆ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿಯ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿನ ಕಲಾವತಿ ಎಂಬುವರ ಮನೆ ಸಂಪೂರ್ಣ ಕುಸಿದು ಹೋಗಿದೆ.

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.