ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ ಅರ್ಧ ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಕೊರೋನಾ ಕರ್ಪ್ಯೂ ರಾಜ್ಯದಲ್ಲಿ ಜಾರಿಯಲ್ಲಿದ್ದರೂ, ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದೇಗೆ ಎನ್ನುವಂತ ಪ್ರಶ್ನೆಯನ್ನು ಹುಟ್ಟುಹಾಕಿತ್ತು. ಈ ಎಲ್ಲಾ ಕಾರಣದಿಂದಾಗಿ ಕೊರೋನಾ ಕರ್ಪ್ಯೂ ನಿಂದ ರಾಜ್ಯದಲ್ಲಿ ಸೋಂಕಿನ ನಿಯಂತ್ರಣದಲ್ಲಿ ಫೇಲ್ ಆಗಿದ್ದೇವೆ. ಹೀಗಾಗಿ ಮೇ.15ರ ನಂತ್ರ ರಾಜ್ಯಾಧ್ಯಂತ ಸಂಪೂರ್ಣ ಲಾಕ್ ಡೌನ್ ಮಾಡುವುದೊಂದೇ ಮಾರ್ಗ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಮೇ.15ರ ನಂತ್ರ ಸಂಪೂರ್ಣ ಲಾಕ್ ಡೌನ್ ನಿಯಮ ಜಾರಿಗೆ ತರಲಿದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಿನ್ನೆ 24 ಗಂಟೆಯಲ್ಲಿ ಕೊರೋನಾ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯುವಂತೆ ಅರ್ಧ ಲಕ್ಷ ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಈ ಮೂಲಕ ಹಿಂದಿನ ಎಲ್ಲಾ ದಾಖಲೆ ಉಡೀಸ್ ಮಾಡಿತ್ತು. ಅಲ್ಲದೇ ಸೋಂಕಿತರಾದಂತ 346 ಜನರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದರು.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 23106 ಸೇರಿದಂತೆ ರಾಜ್ಯಾಧ್ಯಂತ 50112 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1741046 ಗೆ ಏರಿಕೆಯಾಗಿದೆ. ಇವರಲ್ಲಿ ಇಂದು 26841 ಜನರು ಸೇರಿದಂತೆ ಇದುವರೆಗೆ 1236854 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 487288 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿತ್ತು.