ಶಿವಮೊಗ್ಗ.ಸೆ.1 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.02 ಮತ್ತು 03 ರಂದು ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಸೆ.02 ರ ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ನೆರವೇರಿಸುವರು. ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ


ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉಪಸ್ಥಿತಿ ಇರಲಿದ್ದು
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪಾಲ್ಗೊಳ್ಳುವರು.