ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 10 ರಿಂದ 15 ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ ಎನ್ನಲಾಗಿದ್ದು, ಇಂದು ಸಂಜೆ ವೇಳೆಗೆ ಘೋಷಣೆಯಾಗುವ ಸಾಧ್ಯತೆ ಇದೆ.
ಸೋಮವಾರದಿಂದ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೇ.10 ರಿಂದ 15 ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎನ್ನಲಾಗುತ್ತಿದೆ. ಅಲ್ಲದೇ ಕಂಪ್ಲೀಟ್ ಲಾಕ್ ಡೌನ್ ಸಂದರ್ಭದಲ್ಲಿ ಪ್ಯಾಕೇಜ್ ಸೇರಿದಂತೆ ಹಂತ ಹಂತವಾಗಿ ಜನರಿಗೆ ನೆರವಾಗುವಂತ ಕ್ರಮಗಳನ್ನು ಕೂಡ ಕೈಗೊಳ್ಳುವಂತ ಕ್ರಮಗಳನ್ನು ಕೂಡ ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.