ಶಿವಮೊಗ್ಗ: ನಾಳೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದ್ದು, ಶಿವಮೊಗ್ಗ ನಗರದ ಕೇಸರಿಯಿಂದ ಕಂಗೊಳಿಸುತ್ತಿದ್ದು, ಶಿವಮೊಗ್ಗ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ 5 ಎಸ್ಪಿ, 2 ಎಎಸ್ಪಿ, 21 ಡಿವೈಎಸ್ಪಿ, 58 ಇನ್ಸ್ಪೆಕ್ಟರ್, 65 ಪಿಎಸ್ಐ, 198 ಪ್ರೊಬೆಷನರಿ ಪಿಎಸ್ಐ, 114 ಎಎಸ್ಐ, 2259 ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ಗಳು, 692 ಹೋಮ್ ಗಾರ್ಡ್ಸ್ ಸೇರಿದಂತೆ ಕೆಎಸ್ಆರ್ಪಿ, ಎಸ್ಎಎಫ್, ಆರ್ಎಎಫ್ ಸೇರಿದಂತೆ 5 ಸಾವಿರ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜನೆ ಮಾಡಲಾಗಿದೆ.
ನಗರದ ವಿವಿಧೆಡೆ ರೂಟ್ ಮಾರ್ಚ್
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಬಂದೋಬಸ್ತ್ಗೆ ನಿಯೋಜನೆಗೊಂಡಿರುವ ಪೊಲೀಸರಿಗೆ ಇವತ್ತು ಬ್ರೀಫಿಂಗ್ ನಡೆಸಲಾಯಿತು. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಪ್ರಮುಖ ಸೂಚನೆ ನೀಡಿದರು.
ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6ರಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.