ಶಿವಮೊಗ್ಗ: ಜಿಲ್ಲಾ ಸರ್ವೋದಯ ಮಂಡಲ ಅಧ್ಯಕ್ಷರಾಗಿ ಆರ್.ಮನೋಹರ್ ಹಾಗೂ ಕಾರ್ಯದರ್ಶಿಯಾಗಿ ಜಿ.ವಿಜಯಕುಮಾರ್ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ ವತಿಯಿಂದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಕಾರ್ಯಕಾರಿ ಸಮಿತಿ ರಚಿಸಲಾಯಿತು. 2025-28 ರವರೆಗೆ ಕಾರ್ಯಕಾರಿ ಸಮಿತಿ ಇರಲಿದೆ.

ಜಿಲ್ಲಾ ಸರ್ವೋದಯ ಮಂಡಲ ಗೌರವಾಧ್ಯಕ್ಷರಾಗಿ ಬಸವರಾಜಪ್ಪ ಕಂದಗಲ್, ರಾಜ್ಯ ಸಮಿತಿ ಸದಸ್ಯರಾಗಿ ಭಗವಂತ ರಾವ್, ಸಲಹಾ ಸಮಿತಿ ಸದಸ್ಯರಾಗಿ ಎಂ.ಎನ್.ಸುಂದರರಾಜ್, ರೇಣುಕಾ ಗಂಗಾಧರ್ ಆಯ್ಕೆಯಾದರು. ಹೊಸನಗರ ತಾಲೂಕು ಅಧ್ಯಕ್ಷರಾಗಿ ವಿಶ್ವೇಶ್ವರ,

ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಸುಭಾಷ್ ಚಂದ್ರ ಸ್ಥಾನಕ್ ಆಯ್ಕೆಯಾದರು.

ನೂತನ ಅಧ್ಯಕ್ಷ ಮನೋಹರ್ ಮಾತನಾಡಿ, ಮುಂದಿನ ದಿನಗಳಲ್ಲಿ ಗಾಂಧೀಜಿ ಅವರ ಆದರ್ಶ ಮತ್ತು ತತ್ವಗಳನ್ನು ಶಾಲಾ ಮಕ್ಕಳಲ್ಲಿ ಪಸರಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.