ಶಿವಮೊಗ್ಗ, ಸೆ.29:
ಸಿಮ್ಸ್ ಮೆಗಾನ್ ಬೋಧನಾ ಆಸ್ಪತ್ರೆಯಲ್ಲಿ, ಶಿಕ್ಷಣ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳುತ್ತಿರುವ ಕಾರ್ಪೊರೇಷನ್ ಸರ್ವಿಸ್ (ಕೆ ಎಸ್ ಎಫ್ 9) ಗ್ರಾಮಾಂತರ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕಿ ಶಾರದಾ ಪೂರ್ಯಾ ನಾಯ್ಕ್ ವಿರುದ್ಧ ಅಸಭ್ಯವಾಗಿ ಮಾತನಾಡಿದ್ದು ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು

ಹಾಗೂ ಏಜೆನ್ಸಿಯನ್ನು ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಇಂದು ಶಿವಮೊಗ್ಗ ಗ್ರಾಮಾಂತರ ಜೆಡಿಎಸ್ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಬೃಹತ್ ನಡೆಸಿದರು.

ಮೆಗಾನ್ ಆಸ್ಪತ್ರೆ ಜಿಲ್ಲಾ ಸರ್ಜನ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಜೆಡಿಎಸ್ ಶಾರದಾ ಪೂರ್ಯಾನಾಯ್ಕ್ ಅವರು ಕಳೆದ 22 ರಂದು ಮಧ್ಯಾಹ್ನ 12 ಗಂಟೆಗೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುವವರಿಗೆ ಅನಗತ್ಯ ತೊಂದರೆ ನೀಡುತ್ತಿದ್ದೀರಿ, ನೇಮಕಕ್ಕಾಗಿ ತೊಂದರೆ ಕೊಡುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕಾಗಿ ಮಹಿಳಾ ಶಾಸಕಿ ಎಂಬುದನ್ನು ಯೋಚಿಸದೇ ಏಕವಚನದಲ್ಲಿ ಅಸಭ್ಯವಾಗಿ ಮಾತನಾಡುವುದರೊಂದಿಗೆ ಜಾತಿ ನಿಂದನೆಯನ್ನು ಮಾಡಿದ್ದಾರೆ ಎಂಬುದು ಆರೋಪ.

ಈ ಕೂಡಲೇ ಆ ಸಂಸ್ಥೆಯನ್ನು ಕೈಬಿಡಬೇಕು. ಆ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶಾರದಾಪೂರ್ಯಾ ನಾಯಕ್ ಅವರಿಗೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜೆಡಿಎಸ್ ಅತ್ಯಂತ ಉಗ್ರವಾದ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ಜೆಡಿಎಸ್ ಗ್ರಾಮಾಂತರ ಪ್ರಮುಖರಾದ ಕಸಟ್ಟಿ ಸತೀಶ್,

ಕಾಂತರಾಜ್ ಸೋಮಿನಕೊಪ್ಪ ಹಾಗೂ ಇತರರು ಮಾತನಾಡಿ ಏಜೆನ್ಸಿಯ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು.
ಜೆಡಿಎಸ್ ನ ಪ್ರಮುಖರು ಈ ಸಂದರ್ಭದಲ್ಲಿ ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.