ಯಾದಗಿರಿ : ಪ್ರಿಯಾಂಕ್ ಖರ್ಗೆ ಎಲ್ಲಾ ಇಲಾಖೆಗಳ ಸಚಿವರೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಪ್ರವಾಹ ಪೀಡಿತ ಪ್ರದೇಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಕ್ಷೇತ್ರದಲ್ಲಿ ಪರಿಸ್ಥಿತಿ ಏನಾಗಿದೆ ಮೊದಲು

ನೋಡಿ. ಆನಂತರ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಮಾತನಾಡಿ ಎಂದಿದ್ದಾರೆ. ವೈಮಾನಿಕ ಸಮೀಕ್ಷೆ ಮೂಲಕ ಪ್ರವಾಹ ಪೀಡಿತ ಪ್ರದೇಗಳನ್ನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಇದೇ ವೇಳೆ ಕಿಡಿಕಾರಿದ ಬಿ.ವೈ. ವಿಜಯೇಂದ್ರ, ನಾನು ಈ ವಿಷಯ ಪ್ರಸ್ತಾಪಿಸಿದರೆ

ರಾಜಕೀಯದ ಮಾತು ಅನಿಸುತ್ತೆ. ಆದರೆ, ಸಿಎಂ ಸಿದ್ದರಾಮಯ್ಯನವರೇ ರೈತರ ವಿಚಾರದಲ್ಲಿ ಉದಾಸೀನತೆ ಬೇಡ. ವೈಮಾನಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಕೊಟ್ಟಿದ್ದೇವೆಂದರೆ ಸಾಲದು. ಕೇಂದ್ರದತ್ತ ಕೈತೋರಿಸಿ ಸಿಎಂ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಕೇಂದ್ರ

ಸರ್ಕಾರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವ ಉದಾಹರಣೆ ಇಲ್ಲದ ಕಾರಣ ರೈತರು ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.