ಶಿವಮೊಗ್ಗ : ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆದಿರುವ ಘಟನೆ ಭದ್ರಾವತಿ ತಾಲೂಕಿನ ಗ್ರಾಮದ ರಬ್ಬರ್ ಕಾಡು ಗ್ರಾಮದಲ್ಲಿ ನಡೆದಿದೆ.

ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕೃಷ್ಣೇಗೌಡ ಅವರ ಮನೆಯ ಮುಂದೆ ಗಲಾಟೆಯಾಗಿದೆ. ಹಳೆ ವೈಷಮ್ಯ ಹಿನ್ನಲೆ ಕೃಷ್ಣೇಗೌಡ ಮತ್ತು ಅವರ ಪತ್ನಿ ಮೇಲೆ ಹಲ್ಲೆ ನಡೆದಿದೆ.

೧೦-೧೨ ಯುವಕರಿಂದ ಹಲ್ಲೆ ನಡೆದಿದೆ. ಗಲಾಟೆಯನ್ನು ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ಯಲ್ಲಪ್ಪ ಅವರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆದಿದೆ. ಘಟನೆಯಲ್ಲಿ ಪೇಪರ್ ಟೌನ್ ಠಾಣೆಯ ಎಎಸ್ಐ ಮತ್ತು ಕೃಷ್ಣೇಗೌಡರು ಗಾಯಗೊಂಡಿದ್ದಾರೆ.
ಗಾಯಾಳುವನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೇಪರ್ ಟೌನ್ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.