ಶಿವಮೊಗ್ಗ : ಮೈಸೂರಿನಲ್ಲಿ ಹಕ್ಕಿಪಿಕ್ಕಿ ಹರಣಿ ಶಿಕಾರಿ ಸಮುದಾಯದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ನೌಕರಿ ಹಾಗೂ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿಯಿಂದ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಹೊಟ್ಟೆಪಾಡಿಗಾಗಿ ಬದುಕನ್ನು ಅರಸಿ ಪರಿಶಿಷ್ಟ ಪಂಗಡದ ಹಕ್ಕಿಪಿಕ್ಕಿ ಹರಣಿ ಶಿಕಾರಿ ಅಲೆಮಾರಿ, ಸಮುದಾಯದ ಕಲಬುರಗಿ ಜಿಲ್ಲೆಯ ಕೋರೋಬಿಂದು ಕುಲದವರು ಕುಟುಂಬದವರೊಂದಿಗೆ ಬಲೂನ್ ಮಾರಲು ಬಂದಿದ್ದಾರೆ. ಅ.೮ರಂದು ರಾತ್ರಿ ಅವರ ಅಪ್ರಾಪ್ತ ಪುತ್ರಿಯನ್ನು ಯಾರೋ ದುಷ್ಕರ್ಮಿಗಳು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಅಲೆಮಾರಿ ಸಮುದಾಯಕ್ಕೆ ಆತಂಕ ಉಂಟು ಮಾಡಿದೆ. ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಸರ್ಕಾರ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಪಡಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು. ಸೂಕ್ತ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ, ಸಮಿತಿಯ ರಾಜ್ಯಾಧ್ಯಕ್ಷ ಜಗ್ಗು, ನಂಜುಂಡಸ್ವಾಮಿ, ಕುಮುದ, ಪ್ರಭು, ಸುರೇಂದ್ರ, ನೀಮ, ವಿನು, ಟಿ. ವೆಂಕಟೇಶ್ ಇದ್ದರು.