ಶಿವಮೊಗ್ಗ : ನಗರದಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪತ್ರ ಆಸ್ತಿ ವಿವರ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ

ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆ ಪರಿಶೀಲನೆ ನಡೆಸಿದ್ದಾರೆ.