ಶಿವಮೊಗ್ಗ : ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ನಾಯಕರಾದ ದಿ.ಎಸ್. ಬಂಗಾರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಅ.೨೬ರಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಶಿವಮೊಗ್ಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಿದೆ ಎಂದು ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಇವರು ತಿಳಿಸಿದ್ದಾರೆ.

ಈ ಕುರಿತು ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಈ ಬಾರಿ ದಿ:ಬಂಗಾರಪ್ಪನವರ ಹುಟ್ಟುಹಬ್ಬವನ್ನು ವಿಶಿಷ್ಠವಾಗಿ ಆಚರಿಸುವ ಸಲುವಾಗಿ ಶಿವಮೊಗ್ಗದ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಸಾರ್ವಜನಿಕರು ಹೆಚ್ಚಿನ

ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ. ದಾನಿಗಳು ಹೆಚ್ಚಿನ ವಿವರಗಳಿಗಾಗಿ ಡಾ.ಶರತ್ ಮರಿಯಪ್ಪ(೯೬೧೧೧೦೯೯೯೫), ವಿನಯ್ ತಾಂಡ್ಲೆ(೭೨೦೪೫೬೩೦೭೪) ಹಾಗೂ ನಾಗರಾಜ್ ಕುರುವಳ್ಳಿ(೯೪೮೧೭ ೩೬೨೨೨)ಇವರನ್ನು ಸಂಪರ್ಕಿಸಲು ವಿನಂತಿಸಿದ್ದಾರೆ.