ಬೆಂಗಳೂರು, ಲಾಕ್ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು ೧,೨೫೦ ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಇಂದು ಸಚಿವ ಸಂಪುಟದ ಸಹೋ ದ್ಯೋಗಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡಿ ತೆಗೆದು ಕೊಂಡ ತೀರ್ಮಾನಗಳು, ಪರಿಹಾರಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರಕಟಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
- ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
- ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
- ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
- ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ,
- ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
- ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
- ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
- ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
- ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
- ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.
ಲಾಕ್ ಡೌನ್ ಮೇ ೨೪ರವರೆಗೆ ಜಾರಿಯಲ್ಲಿದ್ದು, ರಾಜ್ಯದ ಜನತೆಯ ಆರೋಗ್ಯ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಂಡೆವು. ಈ ನಿರ್ಬಂಧದಿಂದ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಕ್ಷೀಣಿಸಿ ಸಮಾಜದ ಹಲವು ವರ್ಗಗಳ ಜನರ ಬದುಕಿನ ಮೇಲೆ ತೀವ್ರ ಹೊಡೆತ ಬಿದ್ದಿರುವ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಸರ್ಕಾರ ಯಾವತ್ತಿಗೂ ಜನರ ಪರವಾಗಿರುತ್ತದೆ ಎಂದು ಆಶ್ವಾಸನೆ ನೀಡುತ್ತೇನೆ ಎಂದರು.
ಯಾರ್ಯಾರಿಗೆ ಎಷ್ಟೆಷ್ಟು
- ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಹೂವು ಹಾನಿಗೆ 10 ಸಾವಿರ.
- ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ 10 ಸಾವಿರ.
- ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ, ಲೈಸೆನ್ಸ್ ಹೊಂದಿರುವವರಿಗೆ ನೋಂದಣಿ ಮಾಡಿಸಿದ ಪ್ರತಿಯೊಬ್ಬ ಚಾಲಕನಿಗೆ ತಲಾ 3 ಸಾವಿರ.
- ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ.
- ಸಂಘಟಿತ ವಲಯ ಕಾರ್ಮಿಕರಿಗೆ ತಲಾ 2 ಸಾವಿರ
- ರಸ್ತೆ ಬದಿಯಲ್ಲಿ ವ್ಯಾಪಾರಿಗಳಿಗೆ ತಲಾ 2 ಸಾವಿರ ರೂಪಾಯಿ
- ಕಲಾವಿದರು, ಕಲಾವಿದರ ತಂಡಗಳಿಗೆ ತಲಾ 3 ಸಾವಿರ
- 18ರಿಂದ 60 ವರ್ಷದವರೆಗಿನವರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಿದ್ದು, ಈಗಾಗಲೇ 3 ಕೋಟಿ ಡೋಸ್ ತರಿಸಲಾಗಿದೆ ಇದಕ್ಕೆ 1 ಸಾವಿರ ಕೋಟಿ ಭರಿಸಲಾಗಿದೆ.
- ಕೋವಿಡ್ ನಿರ್ವಹಣೆಗಾಗಿ ಹಣವನ್ನು ಪ್ರತಿ ಗ್ರಾಮ ಪಂಚಾಯತಿಗಳಿಗೆ50 ಸಾವಿರದಂತೆ ಮುಂಗಡವಾಗಿ ನೀಡಲಾಗುತ್ತಿದ್ದು, ಇದರಿಂದ 6 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಉಪಯೋಗ.