
ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ರಾಮಕೃಷ್ಣ ವಿದ್ಯಾನಿಕೇತನ ವಸತಿ ನಿಲಯದಿಂದ ನ.5 ಮತ್ತು 6 ರಂದು ಶಾರದಾಮಾತೆ ಜಯಂತ್ಯೋತ್ಸವ, ಶಾಲಾ ವಾರ್ಷಿಕೋತ್ಸವ, ಚಿಣ್ಣರ ಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
5 ರಂದು ಸಂಜೆ 4 ಗಂಟೆಗೆ ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಚಿಣ್ಣರ ಚಿಲುಮೆ 2024-25 ನೇ ಸಾಲಿನ ಎಲ್ ಕೆ ಜಿಯಿಂದ 9 ನೇ ತರಗತಿ ಮಕ್ಕಳಿಗೆ ಪ್ರತಿಭಾಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ವಿನಯಾನಂದ ಸರಸ್ವತಿ ಮಹಾರಾಜ್ ಸಾನಿಧ್ಯ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ನ.6 ರಂದು ಸಂಜೆ 4 ಗಂಟೆಗೆ ಇಲ್ಲಿನ ಕುವೆಂಪುರಂಗಮಂದಿರದಲ್ಲಿ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಮೂಲೆಗುದ್ದೆ ಅಭಿನವ ಚನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
