ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭದ್ರಾವತಿಯ ನ್ಯೂಟೌನ್ ಹಾಗೂ ಸಂಚಾರಿ ಪೊಲೀಸ್ ಠಾಣೆಗಳ ಆಶ್ರಯದಲ್ಲಿ ನ್ಯೂಟೌನ್ ಪೊಲೀಸ್

ಠಾಣೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 58 ನೇ ರಕ್ತದಾನ ಶಿಬಿರ ಆಯೋಜಿಸಿದ್ದು ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು,

ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ಸಾರ್ವಜನಿಕರು ಸೇರಿದಂತೆ ಒಟ್ಟು 75 ಜನ ರಕ್ತದಾನ ಮಾಡಿದ್ದು , ಶಿವಮೊಗ್ಗ ಜಿಲ್ಲಾ ಪೊಲೀಸರು ರಕ್ತದಾನದ ಮೂಲಕ ಕನ್ನಡ ತಾಯಿ ಭುವನೇಶ್ವರಿಗೆ ಗೌರವ ಸಲ್ಲಿಸಿದ್ದಾರೆ