ಶಿವಮೊಗ್ಗ: ಕೋಟೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ವಿದ್ಯಾರ್ಥಿನಿಯ ನಿಗೂಢ ಸಾವಿನ ಪ್ರಕರಣವನ್ನು ತನಿಖೆ ನಡೆಸಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಹಾಗೂ ಅಟ್ರಾಸಿಟಿ ಸಮಿತಿ ಸದಸ್ಯ ಹನುಮಂತಪ್ಪ ಯಡವಾಲ ಆಗ್ರಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿನಿಯರ ನಿಗೂಢ ಸಾವುಗಳು ಆಗುತ್ತಿರುವುದು ಖಂಡನೀಯ, ಕೋಟೆ ರಸ್ತೆಯಲ್ಲಿ ಇರುವ ವಿದ್ಯಾರ್ಥಿನಿ ನಿಲಯದಲ್ಲಿ ೨೧ವರ್ಷದ ವಿದ್ಯಾರ್ಥಿನಿ ವನಿ? ಎಂಬುವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಗಾಗಲೇ ಈ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದ್ರೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಗಳ ನಿರ್ಲಕ್ಷ ಇಲ್ಲಿ ಎದ್ದು ಕಾಣುತ್ತದೆ. ಅಧಿಕಾರಿಗಳು ಹಾರಿಕೆ ಉತ್ತರ ಕೊಡುತ್ತಿದ್ದಾರೆ.

ವಿದ್ಯಾರ್ಥಿನಿಯ ಈ ನಿಗೂಢ ಸ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲೂಕು ಅಧಿಕಾರಿಗಳು ಹಾಗೂ ಹಾಸ್ಟ್ಟೆಲ್ ವಾರ್ಡನ್ ಅವರ ನಿರ್ಲಕ್ಷ್ಯದ ವಿರುದ್ಧ ಹಾಗೂ ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಜಿಪಂ ಸಿಇಒ ಮನೆಯಲ್ಲಿ ಕೂಡ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕಚೇರಿಯಲ್ಲಿಯೇ ವಿ? ಕುಡಿದು ಪ್ರಾಣ ಬಿಟ್ಟಿದ್ದ. ಇದು ದೊಡ್ಡ ಸುದ್ದಿ ಆಗಿದ್ದರೂ ಕೂಡ ಈ ಬಗ್ಗೆ ಯಾರ ವಿರುದ್ಧವೂ ಇದುವರೆಗೂ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳು ಮನಸ್ಸಿಗೆ ಬಂದಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು ತನ್ನ ಕಲ್ಯಾಣವನ್ನೇ ಮರೆತಂತೆ ಕಾಣುತ್ತಿದೆ, ಹಾಸ್ಟ್ಟೆಲ್ ಗಳ ಪರಿಸ್ಥಿತಿಯೂ ಹದಗೆಟ್ಟಿದೆ ಅಲ್ಲಿ ಖರೀದಿಸುವ ಸಾಮಗ್ರಿಗಳಲ್ಲೂ ಆಕ್ರಮ ನಡೆಯುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತನಿಖೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯಾದಂತ ಉಗ್ರ ಹೋರಾಟ ಅನಿವಾರ್ಯ ಎಂದು ಹನುಮಂತಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.