ಶಿವಮೊಗ್ಗ, ನವೆಂಬರ್. 18 ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿರವರು ನ. 23 ರಂದು ಸಂಜೆ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ನ.24 ರಿಂದ 25 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 24 ರಂದು ಬೆಳಗ್ಗೆ 10.00ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಿರುವ ಪಿಯು ಹಾಗು ಪದವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.00ಕ್ಕೆ ನಗರದ ಸಹ್ಯಾದ್ರಿ ಕಲಾ ಹಾಗೂ ವಿಜ್ಞಾನ ಕಾಲೇಜ್ನಲ್ಲಿ ಏರ್ಪಡಿಸಲಿರುವ ವಿದ್ಯಾರ್ಥಿನಿಯರೊಂದಿಗಿನ ಸಂವಾದ ಕಾರ್ಯಕ್ರಮ ಹಾಗೂ ಕಾನೂನು ಅರಿವಿನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮ. 4.30ಕ್ಕೆ ನಗರದ ಮಹಿಳಾ ಪೊಲೀಸ್ ಠಾಣೆ ಭೇಟಿ ನೀಡಲಿದ್ದಾರೆ. ಸಂಜೆ 5.30ಕ್ಕೆ ನಗರದ ಬಿ.ಸಿ.ಎಂ. ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿನಿಯರ ವಸತಿನಿಲಯಕ್ಕೆ ಭೇಟಿ ನೀಡುವರು ಹಾಗೂ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ನ. 25 ರಂದು ಬೆಳಗ್ಗೆ 9.00ಕ್ಕೆ ನಗರದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ “POSH” ಅಧಿನಿಯಮ 2013ರ ತರಬೇತಿ ಕಾರ್ಯಾಗಾರ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆ.11.00ಕ್ಕೆ ಶಿಕಾರಿಪುರಕ್ಕೆ ತೆರಳಿ ಬೆ.11.45ಕ್ಕೆ ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸಲಿದ್ದಾರೆ. ಮ.12.45ಕ್ಕೆ ಶಿಕಾರಿಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಮ. 1.30ಕ್ಕೆ ಪೊಲೀಸ್

ಠಾಣೆಗೆ ಭೇಟಿ, ಮ.3.00ಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ, ಸಂಜೆ 5.00ಕ್ಕೆ ಚನ್ನಕೇಶವ ನಗರದ ಅಲ್ಪಸಂಖ್ಯಾತರ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದು, ಸಂಜೆ 7.10ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ನ. 26 ರಂದು ಬೆಳಗ್ಗೆ ಉಡುಪಿಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.