ಶಿವಮೊಗ್ಗ, ನ.20:
ಕಳೆದ 2022 ನೇ ಸಾಲಿನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಭದ್ರಾವತಿ ಹಳೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಲಂ: PROTECTION OF CHILDREN FROM SEXUAL OFFENCES ACT 2012 U/s: 6 IPC 1860 U/s: 376(2)(n),366 ಅಡಿಯಲ್ಲಿ ಪ್ರಕರಣವು ದಾಖಲಾಗಿರುತ್ತದೆ.

ತನಿಖಾಧಿಕಾರಿಗಳಾದ ಅಂದಿನ ಭದ್ರಾವತಿ ನಗರ ಸಿಪಿಐ ರಾಘವೇಂದ್ರ ಕಾಂಡಿಕೆ ಅವರು ಸದರಿ ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1- ಶಿವಮೊಗ್ಗ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ರವರು ಆರೋಪಿತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 65,000/- ರೂ ದಂಡ ಮತ್ತು ನೊಂದ ಬಾಲಕಿಗೆ ಸರ್ಕಾರದ ಪರವಾಗಿ 4,50,000/- ರೂ ಪರಿಹಾರ ನೀಡಬೇಕಾಗಿ ಆದೇಶಿಸಿರುತ್ತಾರೆ.