ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ)ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು, ಶಿವಮೊಗ್ಗ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ನವಂಬರ್ 24ರಂದು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ. ಗುರುರಾಜ್ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ ಪ್ರತಿವರ್ಷದಂತೆ ಈ ವರ್ಷವೂ ಸಹ ಶಾಲಾ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು ಅಂದು ಬೆಳಿಗ್ಗೆಯಿಂದ ಸ್ಪರ್ಧೆಗಳು ಪ್ರಾರಂಭವಾಗುತ್ತವೆ ಎಂದು ಅವರು ಹೇಳಿದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ರಸ ಪ್ರಶ್ನೆ ಸ್ಪರ್ಧೆ, ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲಿμï ಪ್ರಬಂಧಸ್ಪರ್ಧೆ, ಕನ್ನಡ ಚರ್ಚಾ ಸ್ಪರ್ಧೆ, ಇಂಗ್ಲಿμï ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಭಾವಗೀತೆ, ಜನಪದ ಗೀತೆ, ಚಿತ್ರಕಲೆ, ವಿಜ್ಞಾನ ಮಾದರಿ ತಯಾರಿಕೆ, ಈ ಬಾರಿ ವಿಶೇಷವಾಗಿ ಏಕವ್ಯಕ್ತಿ ಜಾನಪದ ನೃತ್ಯವನ್ನು ನಡೆಸುತ್ತಿರುವುದು ಎಲ್ಲರ ಕುತೂಲವನ್ನು ಹೆಚ್ಚಿಸಿದೆ ಎಂದರು.

ಸ್ಪರ್ಧೆಗಳು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ವಿಭಾಗಗಳಲ್ಲಿ ನಡೆಯಲಿವೆ. ಜಿಲ್ಲೆಯಿಂದ ಸುಮಾರು 130 ಸರಕಾರಿ, ಅನುದಾನಿತ, ಹಾಗೂ ಅನುದಾನ ರಹಿತ ಕಾಲೇಜುಗಳಿಂದ ಸುಮಾರು 2500 ರಿಂದ 3000 ಸಾವಿರ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 70 ಜನ ಸಂಪನ್ಮೂಲ ತೀರ್ಪುಗಾರರು ಈ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಆಗಮಿಸಲಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ಉಪ ನಿರ್ದೇಶಕರ ಜೊತೆ ಚರ್ಚಿಸಿ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಸರ್ವ ಸನ್ನದ್ಧವಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ಸಂಚಾಲಕರಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಇರುತ್ತದೆ. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಸ್ವಾಮೀಜಿಗಳಿಂದ ಚಾಲನೆ :
ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖಾಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕರಾದ ಚಂದ್ರಪ್ಪ ಎಸ್. ಗುಂಡಪಲ್ಲಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್. ವಿ. ಗುರುರಾಜ್ ವಹಿಸಲಿರುವರು.
ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭವು ಅಂದು ಸಂಜೆ 4 ಗಂಟೆಗೆ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅವರಣದಲ್ಲಿ ನಡೆಯಲಿದ್ದು, ಅಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ, ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರ ಹಾಗೂ ಮುಖ್ಯ ಅತಿಥಿಗಳ ಸಮ್ಮುಖದಲ್ಲಿ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿಜೇತ ಸ್ಪರ್ಧಾಳುಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಅತಿ ಹೆಚ್ಚು ಸ್ಪಧಾರ್ಂಕ ಪಡೆದ ಕಾಲೇಜಿಗೆ ಇದೇ ಮೊದಲ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ನೀಡಿ ಪೂಜ್ಯರಿಂದ ಗೌರವಿಸಲಾಗುವುದು.
ಪತ್ರಿಕಾ ಗೋಷ್ಠಿಯಲ್ಲಿ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ ಆಡಳಿತ ಮಂಡಳಿ ಸದಸ್ಯರು, ಬಿಜಿಎಸ್ ಗುರುಪುರ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್. ನಟರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು