ಬೆಂಗಳೂರು :
ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ ಏಳರವರೆಗೆ ಯಥಾವತ್ತಾದ ಲಾಕ್ ಡೌನ್ ಮುಂದುವರೆಸಿದ್ದಾರೆ.


ಇಂದು ಸಂಜರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.
ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

error: Content is protected !!