ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನ. 24ರಂದು ಮಧ್ಯಾಹ್ನ 12 ಗಂಟೆಗೆ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆಯೋಜಿಸಿರುವ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸಿರಾಜ್ ಅಹಮ್ಮದ್ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಾಗೂ ಕಲಾ ಕಾಲೇಜಿನ ವಿದ್ಯಾರ್ಥಿನಿಯರು ಈ ಸಂವಾದದಲ್ಲಿ ಪಾಲ್ಗೊಳ್ಳುವರು. ಮುಖ್ಯವಾಗಿ ಕಾನೂನಿನ ಅರಿವಿನ ಬಗ್ಗೆ ಕಾರ್ಯಕ್ರಮವಿದ್ದು, ಎರಡೂ ಕಾಲೇಜಿನ ವಿದ್ಯಾರ್ಥಿನಿಯರು ಸರಿಯಾದ ಸಮಯಕ್ಕೆ

ಭಾಗವಹಿಸಿ ಸಂವಾದದಲ್ಲಿ ಪಾಲ್ಗೊಂಡು ಸಲಹೆಗಳನ್ನು ಪಡೆಯಬೇಕು ಎಂದು ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್. ಮಂಜುನಾಥ್ ಕೋರಿದ್ದಾರೆ.