ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ

. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಇವರು ಪ್ರಸ್ತುತ BESCOM ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು