ಶಿವಮೊಗ್ಗ : ರಾಜ್ಯದ ಕಾಂಗ್ರೆಸ್ ಸರ್ಕಾರ ಬದುಕಿದೆಯೋ… ಸತ್ತಿದೆಯೋ… ಎಂಬ ಭಾವನೆ ಜನಮಾನಸದಲ್ಲಿ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಟುವಾಗಿ ಟೀಕಿಸಿದರು.

ಅವರು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ನಿಷ್ಕ್ರೀಯವಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆದಿಯಾಗಿ ಎಲ್ಲಾ ಸಚಿವರು, ಶಾಸಕರು, ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ.

ಪ್ರಗತಿಯ ಕುರಿತು ಒಬ್ಬರೂ ಮಾತನಾಡುತ್ತಿಲ್ಲ. ಸಿಎಂ-ಡಿಸಿಎಸ್ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ. ಜನರ ಸಮಸ್ಯೆಗಳಿಗೆ ಸರ್ಕಾರ ಏನೂ ಗಮನ ಕೊಡುತ್ತಿಲ್ಲ. ಬರುವ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.