ಶಿವಮೊಗ್ಗ, ಮೇ.22:
ಜಿಲ್ಲೆಯಲ್ಲಿ ಶನಿವಾರವಾದ ಇಂದು ಕೊರೊನಾ ಸೋಂಕು ಕಂಡು ಬಂದಿರುವವರ ಸಂಖ್ಯೆ ನಿನ್ನೆಗಿಂತ ಕಡಿಮೆಯಾಗಿದೆ. ಇಂದು 663 ಜನರಲ್ಲಿ ಸೊಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇದಕ್ಕೆ ತುತ್ತಾಗಿ 14 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷಿತ 2401 ಜನರಲ್ಲಿ 663 ಮಂದಿಗೆ ಸೋಂಕು ತಗುಲಿದ್ದು, 602 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 686 ಕ್ಕೆ ಏರಿದೆ.
ಶಿವಮೊಗ್ಗ ತಾಲೂಕಿನಲ್ಲಿ 195, ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 126, ಶಿಕಾರಿಪುರ 68, ತೀರ್ಥಹಳ್ಳಿಯಲ್ಲಿ 30, ಸೊರಬ 64, ಸಾಗರ 128, ಹೊಸನಗರ 30 ಹಾಗೂ ಇತರೆ ಜಿಲ್ಲೆಗಳ 22 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ.
26 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7121 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
*ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.