ಶಿವಮೊಗ್ಗ, ಡಿ.01:
2023ನೇ ಸಾಲಿನಲ್ಲಿ, 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 21 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 376 (2) (f), 448 ಐಪಿಸಿ & ಕಲಂ 04 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ಅಂದಿನ ತನಿಖಾಧಿಕಾರಿಗಳಾದ ಶ್ರೀಧರ್ ಸಿಪಿಐ ಭದ್ರಾವತಿ ನಗರ ವೃತ್ತ ಅವರು ಪ್ರಕರಣದ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭೀಯೋಜಕರು ವಾದ ಮಂಡಿಸಿರುತ್ತಾರೆ. ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1 ಶಿವಮೊಗ್ಗ ನ್ಯಾಯಾಲಯದ

ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ರವರು ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 61,000/- ರೂ ದಂಡ ವಿಧಿಸಿರುತ್ತಾರೆ.