ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ/ ಆರೋಪಿಗೆ 20 ವರ್ಷ ಕಠಿಣ ಸಜೆ
ಶಿವಮೊಗ್ಗ, ಡಿ.04:
ಕಳೆದ 2023ನೇ ಸಾಲಿನಲ್ಲಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ 26 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಮಂಜುನಾಥ್ ಬಿ ಪಿಐ ತುಂಗಾನಗರ ಪೊಲೀಸ್ ಠಾಣೆ ರವರು ಸದರಿ ಪ್ರಕರಣದ ತನಿಖೆ ಪೂರೈಸಿ, ಆರೋಪಿ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ

ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿರುತ್ತಾರೆ. ಘನ ನ್ಯಾಯಾಲಯದಲ್ಲಿ ಆರೋಪಿತನ ವಿರುದ್ಧ ಆರೋಪವು ಧೃಡಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC 1 ಶಿವಮೊಗ್ಗ ನ್ಯಾಯಾಲಯದ ಮಾನ್ಯ

ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಆರೋಪಿತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1,00,000/- ರೂ ದಂಡ, ದಂಡ ಕಟ್ಟಲು ವಿಫಲ ನಾದಲ್ಲಿ, 2 ವರ್ಷ ಸಾದಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ದಂಡದ ಮೊತ್ತದಲ್ಲಿ, ನೊಂದ ಬಾಲಕಿಗೆ 75,000/- ಹಾಗೂ ಸರ್ಕಾರದಿಂದ 4,00,000/- ರೂ ಪರಿಹಾರ ನೀಡಲು ಆದೇಶಿಸಿರುತ್ತಾರೆ.