ಶಿವಮೊಗ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಗೌರವಾಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.
ನಮ್ಮ ತಂದೆ ಬಂಗಾರಪ್ಪಾಜಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆತ್ಮೀಯ ಒಡನಾಡಿಗಳಾಗಿ, ರಾಜ್ಯಮಟ್ಟದಲ್ಲಿ ಅನೇಕ ಜನಪರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿ ಹೊಂದಿದ್ದಾರೆ. ನಮ್ಮನ್ನು ಸಹ ಅತ್ಯಂತ ಆತ್ಮೀಯವಾಗಿ , ಪ್ರೀತಿ-ವಿಶ್ವಾಸದಿಂದ ಮಾತನಾಡಿಸಿ

ಮಾರ್ಗದರ್ಶನ ನೀಡುತ್ತಿದ್ದ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರನ್ನು ನಮ್ಮ ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ. ಅವರ ನೆನಪುಗಳು ಮತ್ತು ಮಾರ್ಗದರ್ಶನ ಸದಾ ನಮ್ಮೊಂದಿಗೇ ಶಾಶ್ವತವಾಗಿ ಉಳಿಯುತ್ತವೆ.

ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗೆ ಅಪೂರ್ವ ಕೊಡುಗೆ ನೀಡಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.