ಸಾಗರ(ಶಿವಮೊಗ್ಗ),ಡಿ,೧೫: ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಇಂದಿನವರೆಗೂ ೨೭೪ ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡಿದ್ದು ಇದುವರೆಗೂ ಯಾವುದೇ ಕೆ.ಎಫ್ ಡಿ ಸೋಂಕು ಕಂಡು ಬಂದಿಲ್ಲ ಎಂದು ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು.
ಇಲ್ಲಿನ ಉಪವಿಭಾಗಾಧಿ ಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಕೆ.ಎಫ್.ಡಿ. ಮತ್ತು ಪಲ್ಸ್ ಪೊಲೀಯೋ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿ ಹೊಸ ನಗರ ತಾಲ್ಲೂಕಿನಲ್ಲಿ ೧೬೯ ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಿದ್ದು ಈಗಾಗಲೇ ೮ ಪ್ರಕರಣ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ಸಾಗರ ತಾಲ್ಲೂಕಿನಲ್ಲಿ ಕೆಎಫ್ಡಿ ಸಂಬಂಧ ಆರೋಗ್ಯ ಇಲಾಖೆ ಮತ್ತು ಅರಣ್ಯ ಇಲಾಖೆ ಹಾಗೂ ಪಂಚಾ ಯಿತ್ರಾಜ್ ಇಲಾಖೆಗಳ ಜೊತೆಗೆ ಪಶು ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವ ಹಿಸುವ ಜೊತೆಗೆ ತೀವ್ರ ಜಾಗೃತಿ ವಹಿಸಲಾಗಿದೆ ಎಂದರು.

ಹೊಸನಗರ ತಾಲ್ಲೂಕಿನ ಸೋನಲೆ ವ್ಯಾಪ್ತಿಯಲ್ಲಿ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಾಥಮಿಕ ಕೇಂದ್ರವ್ಯಾಪ್ತಿಯನ್ನು ಹಾಟ್ ಸ್ಪಾಟ್ ಎಂದು ಗುರುತಿಸ ಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಜನರ ರಕ್ತಮಾದರಿ ಸಂಗ್ರಹಿಸಿ ಪರಿಶೀಲನೆ ನಡೆಸ ಲಾಗುತ್ತಿದೆ ಎಂದು ತಿಳಿಸಿದರು.
ಸಾಗರ ಉಪವಿಭಾಗೀಯ ಅಸ್ಪತ್ರೆಯಲ್ಲಿ ಮಂಗನ ಕಾಯಿಲೆಗಾಗಿ ೧೦ ಬೆಡ್ನ ವಿಶೇಷ ಘಟಕ ಪ್ರಾರಂಭಿ ಲಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ನಿಂದ ಜೂನ್ ವರೆಗೆ ಜ್ವರ, ವಾಂತಿ, ತಲೆನೋವು, ಮೈಕೈನೋವು ಇನ್ನಿತರೆ ಸೋಂಕು ಕಂಡು ಬಂದರೆ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸ ಣೆಗೆ ಒಳಪಡಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.
ರೋಗ ನಿವಾರಣೆಯಾಗದಿದ್ದಲ್ಲಿ ಎರಡು ಮೂರು ದಿನಗಳಲ್ಲಿ ಕಡಿಮೆಯಾಗದೆ ಇದ್ದರೆ ಉಪವಿಭಾಗೀಯ ಅಸ್ಪತ್ರೆಗೆ ಚಿಕಿತ್ಸೆಗೆ ಒಳಪಡಬೇಕು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಪಾಸಣಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಉಪವಿಭಾಗೀಯ ಕೇಂದ್ರವ್ಯಾಪ್ತಿಯಲ್ಲಿ ಪಲ್ಸ್ ಪೊಲೀಯೋ ಹಾಕುವ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ದೂರ ಮಾಡಬೇಕು. ಪೊಲೀಯೋ ಹ ಹಾಕಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ರಶ್ಮಿ ಜೆ.ಎಚ್., ಕಾರ್ಯನಿರ್ವಾಹಣಾಧಿಕರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದಸ್ವಾಮಿ ,ಟಿಎಚ್ಓ ಹರ್ಷವರ್ಧನ್, ಡಾ. ರವೀಂದ್ರ, ಡಾ. ನಾಗರಾಜ ನಾಯ್ಕ್, ಡಾ. ಸುರೇಶ್, ದೇವರಾಜ್,ಶಾಸಕರ ವಿಶೇಷ ಕರ್ತವ್ಯ ಅಧಿಕಾರಿ ರಮೇಶ್ ಟಿ.ಪಿ., ಅರಣ್ಯ, ಪಶುಪಾಲನಾ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.